23 December 2024

ಇಂದು ಹಮಾಲಿ ಕಾರ್ಮಿಕರ ಪ್ರತಿಭಟನೆ

  • ಇಂದು ಹಮಾಲಿ ಕಾರ್ಮಿಕರ ಪ್ರತಿಭಟನೆ,,,

ವರದಿ : ಪಂಚಯ್ಯ ಹಿರೇಮಠ

ಕೊಪ್ಪಳ : ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ರಾಜ್ಯದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕುಕನೂರು ತಾಲೂಕ ಹಮಾಲಿ ಕಾರ್ಮಿಕ ಸಂಘದ ಅಧ್ಯಕ್ಷ ನಿಂಗಪ್ಪ ಗೊರ್ಲೆಕೊಪ್ಪ ಹೇಳಿದರು.

ಹಮಾಲಿ ಕಾರ್ಮಿಕರ ಬೇಡಿಕೆಗಳು : 

* ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ 1 ಲಕ್ಷ ರೂಗಳ ಪರಿಹಾರ ನೀಡಬೇಕು ಹಾಗೂ ಶವ ಸಂಸ್ಕಾರದ ಪರಿಹಾರದ ಮೊತ್ತವನ್ನು ರೂಪಾಯಿ 25 ಸಾವಿರಕ್ಕೆ ಹೆಚ್ಚಿಸಬೇಕು.

* ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿ ಮಾಡಬೇಕು.

* ಎಲ್ಲಾ ಹಮಾಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು.

* ಎಪಿಎಂಸಿ ಕಾಯಕ ನಿಧಿ ಯಡಿ ನಿವೃತ್ತಿ ಪರಿಹಾರ ನೀಡಬೇಕು. ಮರಣ ಪರಿಹಾರವನ್ನು ರೂ 2 ಲಕ್ಷಕ್ಕೆ ಹೆಚ್ಚಿಸಬೇಕು.

* ಕೇಂದ್ರ ಸರಕಾರ ಇ -ಶ್ರಮ ಕಾರ್ಡ್ ಪಡೆದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಜಾರಿ ಮಾಡಬೇಕು.

* ಮಿಲ್ ಗೋಡೌನ್ ವೇರ ಹೌಸ್ ಗಳಲ್ಲಿ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡಬೇಕು.

* ವಸತಿಹೀನ ಹಮಾಲರಿಗೆ ವಸತಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು.

ಈ ಪ್ರತಿಭಟನೆಯೂ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕುಕನೂರು ಎಪಿಎಂಸಿಯಿಂದ ಅಂಬೇಡ್ಕರ್ ವೃತ್ತದ ವರೆಗೆ ಸಾಗಿ ಮರಳಿ ವೀರಭದ್ರಪ್ಪ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿ ತಹಸೀಲ್ದಾರರ ಮೂಲಕ ಶಾಸಕರ, ಸಚಿವರ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.