ಇರಕಲ್ಲಗಡ ಶ್ರೀ ಈಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ
ಕೊಪ್ಪಳ : ಕೊಪ್ಪಳ ತಾಲೂಕು ಶ್ರೀ ಈಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಇರಕಲ್ಲಗಡದ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಹುಟ್ಟುಹಬ್ಬದ ಪ್ರಯುಕ್ತ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು
ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಪುಷ್ಪಾರ್ಪಣೆ ಮಾಡುವುದರ ಮೂಲಕ ಯಶಸ್ವಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಭಾರತವು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಸ್ಮರಿಸುವ, ಆಚರಿಸುವ ದಿನ. ಆದರೆ ಮೂಲತಃ ಇಂದು ಶಿಕ್ಷಕರ ದಿನವಾಗಿ ಆಚರಿಸಲು ಕಾರಣ ಬೇರೆಯೇ ಇದೆ. ಭಾರತದಲ್ಲಿ ಶಿಕ್ಷಕರ ದಿನವನ್ನು ಈ ದಿನದಂದು ಆಚರಿಸುವ ಮೂಲಕ ದೇಶದ ಎಲ್ಲ ಪ್ರಜೆಗಳು ಸಹ ತಮಗೆ ಬುದ್ಧಿವಾದ ಹೇಳಿ, ತಪ್ಪನ್ನು ತಿದ್ದಿ, ಪಾಠ ಹೇಳಿಕೊಟ್ಟ, ಅಕ್ಷರ ಕಲಿಸಿಕೊಟ್ಟ, ಜೀವನಕ್ಕೆ ಮಾರ್ಗದರ್ಶನ ನೀಡುವ ತಮ್ಮೆಲ್ಲ ಶಿಕ್ಷಕರನ್ನು ನೆನಪಿಸಿ ಅವರಿಗೆ ಧನ್ಯವಾದಗಳನ್ನು ಹೇಳುವ ದಿನ. ಅವರ ಕೊಡುಗೆಗಳನ್ನು ಸ್ಮರಿಸುವ ದಿನ
ಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕಿ ಗುರು ಮಾತೆಯರಿಗೆ ಸಂಸ್ಥೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರು ನಾಗರಾಜ ಗುಡಿ ಹಾಗೂ ಅವರ ಧರ್ಮಪತ್ನಿಯವರನ್ನು ಒಳಗೊಂಡು ಶಿಕ್ಷಕರಿಗೆ ಶಾಲು ಹೊದಿಸಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ನಾಗರಾಜ್ ಆರ್ ಗುಡಿ ಹಾಗೂ ಅವರ ಧರ್ಮ ಪತ್ನಿಯವರಾದ ವಿಜಯಲಕ್ಷ್ಮಿ ಗುಡಿ ಹಾಗೂ ಮುಖ್ಯ ಗುರುಗಳು, ಸರ್ವ ಸಿಬ್ಬಂದಿ ವರ್ಗ, ಮುದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡ ಶಾಲಾ ಕಾರ್ಯಕ್ರಮದಲ್ಲಿ ಪ್ರಿಯ ಶಿಕ್ಷಕ ಶಿಕ್ಷಕಿಯರಿಗೆ ವಿವಿಧ ಆಟೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ವಿಜಯಶಾಲಿಯಾದ ಶಿಕ್ಷಕ ಶಿಕ್ಷಕಿಯರಿಗೆ ನಮ್ಮ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದ ಆರನೇ ಏಳನೇ ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಹುಮಾನಗಳನ್ನು ನೀಡಿದರು ಅವರಿಗೆ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು
More Stories
ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರ ಇಲಾಖೆ ಉಪನಿಬಂಧಕ ದಸ್ತಗೀರ್ ಅಲಿ
ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರ ಇಲಾಖೆ ಉಪನಿಬಂಧಕ ದಸ್ತಗೀರ್ ಅಲಿ
ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯಿಂದ ಜಾನಪದ ನೃತ್ಯ ವೈಭವದ ಸಮೂಹ ನೃತ್ಯ ಪ್ರದರ್ಶನ