23 December 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ, ಆರ್ಥಿಕ ಸಮೀಕ್ಷೆ ಜಾರಿ:ಸಿ.ಎಂ. ಸಿದ್ದರಾಮಯ್ಯ

  1. ಕಾಂಗ್ರೆಸ್ ಅಧಿಕಾರಕ್ಕೆ ಬಂಸಿಎಂದರೆ ಜಾತಿ, ಆರ್ಥಿಕ ಸಮೀಕ್ಷೆ ಜಾರಿ

— ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

— ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆ 

ಕುಷ್ಟಗಿ: ದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬಂದರೆ ಜಾತಿ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ.

ಮೈತ್ರಿಕೂಟದಲ್ಲಿ ಒಂದು ವರ್ಷಕ್ಕೆ ಒಬ್ಬ ಪ್ರಧಾನಿ ಹೇಳಿಕೆ ಪ್ರಸ್ತಾಪಿಸಿ, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವದ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ ಹತಾಶೆಯಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮೋದಿಗೆ ತಿರುಗೇಟು ನೀಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ 0 % ಕಮಿ ಬಗ್ಗೆ ತನಿಖೆ ನಡೆಯುತ್ತಿದೆ, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಮೋದಿ ಕಳೆದ ಹತ್ತು ವರ್ಷದ ಪ್ರಮಾಣಿಕ ಆಡಳಿತ ನಡೆಸಲಿಲ್ಲ. ರೈತರಿಗೆ ಜನಪರ ಕಾರ್ಯಕ್ರಮ ಜಾರಿಯಾಗಲಿಲ್ಲ. ನಮ್ಮ ಸರ್ಕಾರಕ್ಕೆ ಬಂದ ಮೇಲೆ ಆಶ್ವಾಸನೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸಿದೆ. ಈವರೆಗೂ ಶಕ್ತಿ ಯೋಜನೆ 200 ಕೋಟಿ ಜನ ಸೌಲಭ್ಯ ಪಡೆದಿದ್ದಾರೆ. ಬಡವರೆಲ್ಲಾ ಕಾಂಗ್ರೆಸ್ ಪರ ಆಗ ಅಂತ ಮೋದಿಯವರು ಅಕ್ಕಿ ನೀಡದೇ ರಾಜ್ಯದ ಜನತೆಗೆ ದ್ರೋಹ ಮಾಡಿದ್ರು. ಹೀಗಾಗಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿಯ ಹಣವನ್ನು ಅರ್ಹ ಖಾತೆಗೆ ಹಾಕದಿದ್ದರೆ.

ದೇಶದ ಹಿಂದುಳಿದ, ದಲಿತ, ಎಸ್.ಟಿ. ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಆದರೆ, ಮೋದಿಯವರು ಮೀಸಲಾತಿ ವಿರುದ್ಧ ಇದ್ದಾರೆ. ಜಾತಿ ಜಾತಿಗಳ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಬಿಜೆಪಿಗರಿಗೆ ಈ ಚುನಾವಣೆಯಲ್ಲಿ ತಕ್ಕ ನೀಡಿ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿರುವ ಮಹಿಳೆಯರ ಖಾತೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ಇಡೀ ದೇಶದ ರೈತರ ಸಾಲ ಮನ್ನಾ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ನ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅಂಬಾನಿ, ಅದಾನಿಯಂತಹ ಬಂಡವಾಳ ಶಾಹಿ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ಒಪ್ಪದ ಮೋದಿ ಯಾರ ಪರ ಎನ್ನುವುದನ್ನು ದೇಶದ ಜನರಿಗೆ ಮನವರಿಕೆಯಾಗಿದೆ. ಕೊಪ್ಪಳ ಕ್ಷೇತ್ರಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಹಿಟ್ನಾಳ ಕುಟುಂಬ ಎರಡು ಬಾರಿ ಸೋತಿದೆ. ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಹತ್ತು ವರ್ಷದ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ? ಎಷ್ಟು ಅಭಿವೃದ್ಧಿ ಮಾಡಿದರು? ರೈತರ ಬದುಕಿನಲ್ಲಿ ಬದಲಾವಣೆ ಆಯ್ತಾ? ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ 15 ಲಕ್ಷ ಬಂತಾ? ಬಿಜೆಪಿ ನುಡಿದಂತೆ ನಡೆದಿದ್ದಾರಾ? ಎಂದು ಆಲೋಚಿಸಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಗ್ಯಾರಂಟಿ ಅನುಷ್ಠಾನಗೊಳಿಸಿ, ರಾಜ್ಯದ ಬಡವರ ಹಿತ ಕಾಪಾಡಿದ್ದೇವೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಟ್ಟಿರುವ ಕೊಡುಗೆ ಮರೆಯಲು ಸಾಧ್ಯವಿಲ್ಲ. ಕೇಂದ್ರದಲ್ಲಿ ವಾಜಪೇಯಿ ಅವರ ಸರ್ಕಾರದಲ್ಲಿ ಉಪ ಪ್ರಧಾನಿ ಆಡ್ವಾಣಿ ಅವರು ಕರ್ನಾಟಕಕ್ಕೆ 371 ಜೆ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಕಲ್ಯಾಣ ಹೇಳಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಪರಿಣಾಮ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿ ಈ ಭಾಗದ ಮಕ್ಕಳ ಭವಿಷ್ಯ ರೂಪಿಸಲು ನೆರವಾದರು. ನಿಜವಾಗಿಯೂ ನೀವು ಭಾಗ್ಯವಂತರು, ಪುಣ್ಯವಂತರು ಎಂದರು.

371ಜೆ ಮೂಲಕ ಶೈಕ್ಷಣಿಕ ಮತ್ತು ಉದ್ಯೋಗಿಕ ಮೀಸಲಾತಿ ನೀಡಿ ನಿಮಗೆ ಶಕ್ತಿ ತುಂಬಲಾಯಿತು. ಇಡೀ ಭಾರತದಲ್ಲಿ ಯಾರೂ ಮಾಡಲಾಗದ ತೀರ್ಮಾನವನ್ನು ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗೆ ಶಕ್ತಿ ತುಂಬಿದರು. ಈ ಕಾರ್ಯಕ್ಕೆ ಈ ಭಾಗದ ಜನ ಪಕ್ಷಭೇದ ಮರೆತು, ಜಾತಿ, ಧರ್ಮ ಬೇಧ ಮರೆತು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಎಂದು ಮನವಿ ಮಾಡಿದರು.

ಸ್ಥಳೀಯ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ನವಲಿಯಲ್ಲಿ ಅಣೆಕಟ್ಟು ಕಟ್ಟಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ ನಮ್ಮ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದು, ಚುನಾವಣೆ ನಂತರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜತೆ ಚರ್ಚೆ ಮಾಡಿ ಮುಖ್ಯಮಂತ್ರಿ ರೈತರ ರಕ್ಷಣೆಗೆ ಈ ನೀರನ್ನು ಬಳಸಲಾಗಿದೆ.

ಬಡವರಿಗಾಗಿ ಕಾರ್ಯಕ್ರಮ ರೂಪಿಸಿದ್ದರೆ ಅದು ಕಾಂಗ್ರೆಸ್ ಪಕ್ಷ. ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಗ್ಯಾರಂಟಿಯಿಂದ ನಿಮ್ಮ ಹೊಟ್ಟೆ ತುಂಬುತ್ತಿದೆಯೇ? ನಮ್ಮ ಸರ್ಕಾರಕ್ಕೆ ಬಂದ ಮೊದಲ ದಿನವೇ ನಮ್ಮ ಐದು ಗ್ಯಾಂಟಿ ಯೋಜನೆಗಳು ಅನುಮೋದನೆ ನೀಡಿದೆ.

ಆಹಾರ ಭದ್ರತಾ ಕಾಯ್ದೆ, ಉಳುವವನೇ ಭೂಮಿಯ ಒಡೆಯ, ಬ್ಯಾಂಕುಗಳ ರಾಷ್ಟ್ರೀಕರಣ, 371ಜೆಯಂತಹ ಕ್ರಾಂತಿಕಾರಿ ಯೋಜನೆ ತಂದವರು ಕಾಂಗ್ರೆಸ್.

ಪ್ರಧಾನಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಇಂತಹ ಯಾವುದಾದರೂ ಒಂದು ಯೋಜನೆ ನೀಡಿದ್ದೀರಾ? ಎಂದು ಪ್ರಶ್ನಿಸಿದರು.

ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವ ಭೈರತಿ ಸುರೇಶ ಮಾತನಾಡಿ, ದೇಶದ

ಶಿಷ್ಟರ ರಕ್ಷಣೆ ಮಾಡೋದಕ್ಕೆ ನಾವು ಚುನಾವಣೆ ಮಾಡೋಣ. ಬಿಜೆಪಿಯವರು ಭ್ರಷ್ಟರನ್ನು ರಕ್ಷಣೆಗೆ ನಿಂತಿದ್ದಾರೆ. ಜಾತಿ ಜನಗಳ ನಡುವೆ ಒಡೆದಾಳುವ ಬಿಜೆಪಿಗೆ ಪಾಠ ಕಲಿಸಿ. ಈ ಭಾಗದಲ್ಲಿ ಕರಡಿ ಸಂಗಣ್ಣ ಸೇರ್ಪಡೆಯಿಂದ ಕಾಂಗ್ರೆಸ್ ಬಲ ಹೆಚ್ಚಿದ್ದು, ಕಳೆದ ಎರಡು ಬಾರಿ ಸೋಲುಂಡ ಹಿಟ್ನಾಳ ಕುಟುಂಬಕ್ಕೆ ಈ ಬಾರಿ ಆಶೀರ್ವದಿಸಿ, ಗೆಲ್ಲಿಸಿ ಎಂದರು.

 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ದೇಶದ ಯುವಕರಿಗೆ ಉದ್ಯೋಗ ನೀಡುತ್ತೇವೆಂದು ಅಧಿಕಾರಕ್ಕೆ ಬಂದ ಮೋದಿಯವರು ಉದ್ಯೋಗ ನೀಡದೆ ಯುವಕರಿಗೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಮೋದಿ ಮೋದಿ ಎಂದು ಕೂಗುವ ಬದಲು ಉದ್ಯೋಗ ನೀಡಿ ಎಂದು ಮೋದಿನಾ ಪ್ರಶ್ನಿಸಿ ಎಂದರೇ ಬಿಜೆಪಿಗರು ನನ್ನ ಮೇಲೆ ಮುಗಿಬಿದ್ದರು. ಯುವಕರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿಗರು ಮಾಡುತ್ತಿದ್ದಾರೆ. ಯುವ ಜನತೆ ಎಚ್ಚರಿಕೆ ವಹಿಸಿದರು.

ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಕೀರ್ತಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲುತ್ತೆ. ಮೋದಿ ದೇವರಂತೆ, ಬಿಜೆಪಿ ಅಭ್ಯರ್ಥಿಗಳ ಪೂಜಾರಿಗಳಂತೆ ಹಾಗದ್ರೆ ದೇಶದ ಎಲ್ಲ ಕಡೆ ಮೋದಿಯವರನ್ನೇ ನಿಲ್ಲಿಸಬೇಕಿತ್ತು. ಯಾಕೆ ಅಭ್ಯರ್ಥಿಗಳನ್ನು ಹಾಕಿದ್ರೆ. ಲೂಟಿ ರವಿ, ಸಿ.ಟಿ.ರವಿ, ಓಟಿ ರವಿ ನನ್ನ ಬಗ್ಗೆ ಮಾತಾಡ್ತಾರೆ. ನಿಮಗೆ ತಾಕತ್ತಿದ್ದರೇ ಜನರಿಗೆ ಸತ್ಯ ಹೇಳಿ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಡಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ.

ಜಿಪಂ ಮಾಜಿ ಸದಸ್ಯ ನೇಮಣ್ಣ ಮೇಲಸಕ್ರಿ, ವಿಜಯಕುಮಾರ್ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ, ಮಾಜಿ ವಿಪ ಸಭಾಪತಿ ವಿ.ಆರ್.ಸುದರ್ಶನ, ವೆಂಕಟರಾಮಯ್ಯ, ವಿಪ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪುರ, ಎಪಿಪಿ ಜಿಲ್ಲಾಧ್ಯಕ್ಷ ಕನಕಪ್ಪ, ರಾಜ್ಯ ಕಾರ್ಯದರ್ಶಿ ಸಿದ್ದನಗೌಡ, ಮಹಿಳಾ ಜಿಲ್ಲಾಧ್ಯಕ್ಷ ಮಾಲತಿ ನಾಯಕ, ಮುಖಂಡರಾದ ಬಸವರಾಜ ಕರಡಿಮಠ, ಅಮರೇಶ ಕರಡಿಮಠ. ಅಮರೇಶ. ಅದರಲ್ಲಿರಿದ್ದರು.

 

ಫೋಟೋ ಕ್ಯಾಪ್ಸನ್: 01 ಕುಷ್ಟಗಿಯ

ಟಿ.ಎ.ಪಿ.ಸಿ.ಎಂ.ಎಸ್. ಮೈದಾನದಲ್ಲಿ ಸೋಮವಾರ ನಡೆಯಲಿರುವ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆ ವಿದ್ಯುಕ್ತವಾಗಿ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಮಾಡಿದರು.

 

ಫೋಟೋ ಕ್ಯಾಪ್ಸನ್: 02 ಕುಷ್ಟಗಿಯ

ಟಿ.ಎ.ಪಿ.ಸಿ.ಎಂ.ಎಸ್. ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇದೆ.

 

ಫೋಟೋ ಕ್ಯಾಪ್ಸನ್:- ಕುಷ್ಟಗಿ ಪ್ರಜಾಧ್ವನಿ ಲೋಕಸಭಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ಹೂವಿನ ಹಾರ ಹಾಕಿ, ಅಭಿಮಾನ ಮೆರೆದರು.