23 December 2024

ಕೊಪ್ಪಳ ಲೋಕಸಭಾ ಕ್ಷೇತ್ರದ ಮತ ಎಣಿಕೆ: ಸ್ಟ್ರಾಂಗ್ ರೋಮ್‌ ತೆರೆದ ಜಿಲ್ಲಾ ಚುನಾವಣಾಧಿಕಾರಿಗಳು

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ

*ಕೊಪ್ಪಳ ಲೋಕಸಭಾ ಕ್ಷೇತ್ರದ ಮತ ಎಣಿಕೆ: ಸ್ಟ್ರಾಂಗ್ ರೋಮ್‌ ತೆರೆದ ಜಿಲ್ಲಾ ಚುನಾವಣಾಧಿಕಾರಿಗಳು*

ಕೊಪ್ಪಳ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಮಂಗಳವಾರ (ಜೂನ್ 4ರಂದು) ಚುನಾವಣಾ ವೀಕ್ಷಕರು, ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ಅಭ್ಯರ್ಥಿಗಳ ಏಜೆಂಟರು ಹಾಗೂ ಭದ್ರತಾ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್‌ನ್ನು ತೆರೆದರು.

 08-ಕೊಪ್ಪಳ ಲೋಕಸಭಾ ಕ್ಷೇತ್ರದ ಮತ ಎಣಿಕೆಗಾಗಿ ಜಿಲ್ಲಾಡಳಿತದಿಂದ ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎಂಟು ವಿಧಾನ ಕ್ಷೇತ್ರಗಳವಾರು ಮತ್ತು ಅಂಚೆ ಮತ ಎಣಿಕೆಗಾಗಿ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ಒಂದೊಂದು ಸ್ಟ್ರಾಂಗ್ ರೂಮ್‌ನ್ನು ತೆರೆಯಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ಇತರ ಅಧಿಕಾರಿಗಳು, ಅಭ್ಯರ್ಥಿಗಳ ಏಜೆಂಟರು ಹಾಗೂ ಭದ್ರತಾ ಸಿಬ್ಬಂದಿಗಳು ಉಪಸ್ಥಿತರಿದ್ದರು.