4 April 2025

:ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರಿಗೆ ಎಂ ಎಲ್ ಸಿ ಸ್ಥಾನ ನೀಡುವಂತೆ: ಪರಶುರಾಮ್ ಕೆರೆಹಳ್ಳಿ ಆಗ್ರಹ

  1.  

ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರಿಗೆ ಎಂಎಲ್ ಸಿ ಸ್ಥಾನ ನೀಡುವಂತೆ ಪರಶುರಾಮ್ ಕೆರೆಹಳ್ಳಿ ಆಗ್ರಹ

ಕೊಪ್ಪಳ : ಇದೆ ಜೂನ್ ತಿಂಗಳಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ 

ಆರ್ ಧರ್ಮಸೇನ ರವರಿಗೆ ಆಯ್ಕೆ ಮಾಡಬೇಕೆಂದು ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಾಹೇಬರಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಪರಿಶಿಷ್ಟ ಜಾತಿ ಭಾಗದ ವತಿಯಿಂದ ಮನವಿ ಮಾಡಿಕೊಳ್ಳುತ್ತೇವೆ.

 ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಅಧ್ಯಕ್ಷರಾಗಿ ಕಳೆದ ಮೂರು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಜನಾಂಗವು ಕಾಂಗ್ರೆಸ್ ಪಕ್ಷಕ್ಕೆ ಒಲವು ತೋರುವಂತೆ ಮತ್ತು ಕಾಂಗ್ರೆಸ್ ಪಕ್ಷ ಗೆಲ್ಲುವಂತೆ ಈ ಚುನಾವಣೆಯಲ್ಲಿ ದಲಿತ ಸಮುದಾಯಗಳು ಕಾಂಗ್ರೆಸ್ ಪಕ್ಷ ಜೊತೆ ಕೈಜೋಡಿಸುವಂತೆ ನಿರಂತರವಾಗಿ ಎಲ್ಲಾ ರಾಜ್ಯ ಮಟ್ಟದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷಗಳ ಸಹಯೋಗದೊಂದಿಗೆ ಎಲ್ಲಾ ಜಿಲ್ಲಾ ಮಟ್ಟಗಳಲ್ಲಿ ಪಕ್ಷ ಬಲಪಡಿಸುವಂತೆ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ, ಸನ್ಮಾನ್ಯ ಆರ್ ಧರ್ಮ ಸೇನ ರವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎನ್.ರಾಚಯ್ಯ ಅವರ ಮಗ ಆಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಅವಕಾಶವನ್ನು ಕೊಡಲಿಲ್ಲ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಮಾಡ ಬೇಕು, ನಿಗಮ ಮಂಡಳಿ ಗಳಲ್ಲಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಆದ್ದರಿಂದ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಜಿಲ್ಲಾ ಅಧ್ಯಕ್ಷರುಗಳು, ಮಾಧ್ಯಮ ವಕ್ತಾರರು ಹಾಗೂ ದಲಿತ ಮುಖಂಡರುಗಳು, ದಲಿತ ಕಾರ್ಯಕರ್ತರು ಒತ್ತಾಯ ಮಾಡುತ್ತೇವೆ, ಹಾಗಾಗಿ ಈ ಸಲವಾದರೂ ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಸನ್ಮಾನ್ಯ ಆರ್ ಧರ್ಮಸೇನರವನ್ನು ಆಯ್ಕೆ ಮಾಡಿ ವಿಧಾನಪರಿಷತ್ತಿಗೆ ಕಳಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಎಂದು ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಎಚ್ ಪೂಜಾರ್ ರವರು ಮತ್ತು ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರರು ಪರಶುರಾಮ್ ಕೆರೆಹಳ್ಳಿ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.